
ಮುಂಬೈ: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದಲ್ಲದೆ ಪೊಲೀಸರೊಂದಿಗೆ ಜಗಳವಾಡಿ ಹಲ್ಲೆ ಮಾಡಿದ ಆರೋಪದ ಮೇಲೆ ನಟಿ ಕಾವ್ಯಾ ಥಾಪರ್ ಅವರನ್ನು ಬಂಧಿಸಲಾಗಿದೆ.
ಶುಕ್ರವಾರ ನಸುಕಿನ 1 ಗಂಟೆಗೆ ಮುಂಬೈನ ಜುಹು ಪ್ರದೇಶದಲ್ಲಿರುವ ಮ್ಯಾರಿಯಟ್ ಹೋಟೆಲ್ ನಿಂದ ಕಾವ್ಯಾ ಥಾಪರ್ ಮದ್ಯಪಾನ ಮಾಡಿ ಕಾರ್ ಚಾಲನೆ ಮಾಡಿಕೊಂಡು ಹೊರಟಿದ್ದಾರೆ. ನಿಯಂತ್ರಣ ತಪ್ಪಿದ ಕಾರ್ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಇದನ್ನು ಗಮನಿಸಿದ ದಾರಿಹೋಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ಬಂದು ವಿಚಾರಿಸಿದಾಗ ಪೊಲೀಸರೊಂದಿಗೆ ಜಗಳವಾಡಿದ ಕಾವ್ಯಾ ಅವರನ್ನು ಅವಾಚಚ್ಯವಾಗಿ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಹೀಗಾಗಿ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 26 ವರ್ಷದ ಕಾವ್ಯಾ ಥಾಪರ್ ತೆಲುಗು, ತಮಿಳು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.