ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದು ರಾಗಿಣಿ ಎಸ್ಕೇಪ್ ಆಗಿದ್ದಾರೆ ಎಂದು ಹೇಳಲಾಗಿದೆ.
ರಾತ್ರಿ 11 ಗಂಟೆಗೆ ರಾಗಿಣಿ ಮನೆಯಿಂದ ಹೊರ ಹೋಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲವೆಂದು ಭದ್ರತಾ ಸಿಬ್ಬಂದಿ ಹೇಳಿದ್ದಾರೆ. ಯಲಹಂಕದಲ್ಲಿರುವ ನಿವಾಸದಿಂದ ರಾಗಿಣಿ 11 ಗಂಟೆಗೆ ಹೊರ ಹೋಗಿದ್ದಾರೆ ಎನ್ನಲಾಗಿದೆ.
ಸೆಕ್ಯೂರಿಟಿ ಗಾರ್ಡ್ ಈ ಬಗ್ಗೆ ಮಾಹಿತಿ ನೀಡಿದ್ದು, ರಾಗಿಣಿ ವಿಚಾರಣೆಗೆ ಹಾಜರಾಗದೆ ಸ್ನೇಹಿತರ ಮನೆಗೆ ತೆರಳಿರಬಹುದೆಂದು ಹೇಳಲಾಗಿದೆ.
ಇಂದು ಬೆಳಗ್ಗೆ 10 ಗಂಟೆಗೆ ಅವರು ವಿಚಾರಣೆಗೆ ಹಾಜರಾಗಬೇಕಿದೆ. ಅವರು ಕಾರಣ ಹೇಳಿ ಮುಂದಿನ ದಿನಾಂಕದಲ್ಲಿ ವಿಚಾರಣೆಗೆ ಹಾಜರಾಬಹುದು. ಈ ನಡುವೆ ಕಾನೂನು ಸಲಹೆ ಪಡೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.