
ಎಸ್. ನಾರಾಯಣ್ ನಿರ್ದೇಶಿಸುತ್ತಿರುವ ‘5ಡಿ’ ಸಿನಿಮಾದಲ್ಲಿ ಅದಿತ್ಯ ನಾಯಕನಾಗಿ ನಟಿಸುತ್ತಿದ್ದು, ಅದಿತ್ಯ ಜೊತೆ ಅದಿತಿ ಪ್ರಭುದೇವ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಟೈಟಲ್ ಅನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಬೇಡಿಕೆಯ ನಟಿಯಾಗಿರುವ ಅದಿತಿ ಪ್ರಭುದೇವ ಅವರಿಗೆ ಒಂದರ ಮೇಲೊಂದು ಸಿನಿಮಾಗಳು ಕೈಬೀಸಿ ಕರೆಯುತ್ತಲೇ ಇವೆ. ಇದೀಗ 5ಡಿ ಚಿತ್ರದಲ್ಲಿ ಮಿಂಚಲು ಸಜ್ಜಾಗಿದ್ದಾರೆ.

