ಹಿಂದಿ ರಾಷ್ಟ್ರ ಭಾಷೆ ಅಲ್ಲವೆಂದು ನಟ ಸುದೀಪ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ನಡೆದಿದ್ದು, ಹಿಂದಿ ಭಾಷಾ ವಿವಾದಕ್ಕೆ ಸುದೀಪ್ ಅಂತ್ಯ ಹಾಡಿದ್ದಾರೆ.
ನಾನು ಬೇರೆಯದೇ ರೀತಿಯ ಸನ್ನಿವೇಶದಲ್ಲಿ ಇದನ್ನು ಹೇಳಿದ್ದೇನೆ ಎಂದು ಅಜಯ್ ದೇವಗನ್ ಟ್ವೀಟ್ ಗೆ ಸುದೀಪ್ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ನಮ್ಮ ದೇಶದ ಎಲ್ಲಾ ಭಾಷೆಗಳನ್ನು ಗೌರವಿಸುತ್ತೇನೆ. ನಾನು ಯಾರನ್ನೂ ನೋಯಿಸಲು, ಪ್ರಚೋದಿಸಲು ಅಥವಾ ಯಾವುದೇ ಚರ್ಚೆಯನ್ನು ಪ್ರಾರಂಭಿಸಲು ಹೇಳಿಕೆ ನೀಡಿಲ್ಲ. ಹಿಂದಿ ರಾಷ್ಟ್ರಭಾಷೆ ಎಂದು ಏಕೆ ಹೇಳಿದ್ದೆ ಎಂದು ನಿಮ್ಮನ್ನು ಖುದ್ದಾಗಿ ಭೇಟಿಯಾದಾಗ ತಿಳಿಸುತ್ತೇನೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
ಸದ್ಯದಲ್ಲಿಯೇ ನಾವು ಭೇಟಿಯಾಗೋಣ. ಇದಕ್ಕೆ ಫುಲ್ ಸ್ಟಾಪ್ ಇಡಲು ಬಯಸುತ್ತೇನೆ ಎಂದು ಅಜಯ್ ದೇವಗನ್ ಅವರ ಟ್ವೀಟ್ ಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.
ನೀವು ಹಿಂದಿಯಲ್ಲಿ ಕಳುಹಿಸಿದ ಟೆಕ್ಸ್ಟ್ ನನಗೆ ಅರ್ಥವಾಯಿತು. ನನ್ನ ಪ್ರತಿಕ್ರಿಯೆಯನ್ನು ಕನ್ನಡ ಭಾಷೆಯಲ್ಲಿ ಟೈಪ್ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಆಶ್ಚರ್ಯ ಪಡುತ್ತಿದ್ದೆ. ನಾವು ಭಾರತಕ್ಕೆ ಸೇರಿದವರಲ್ಲವೇ ಎಂದು ಸುದೀಪ್ ನಟ ಅಜಯ್ ದೇವಗನ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ನಾನು ನಮ್ಮ ದೇಶದ ಪ್ರತಿಯೊಂದು ಭಾಷೆಯನ್ನು ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ ಸರ್. ಶೀಘ್ರದಲ್ಲೇ ನಿಮ್ಮನ್ನು ನೋಡುವ ಭರವಸೆ ಇದೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.