ಬಾಲಿವುಡ್ ನಟ, ನಿರ್ಮಾಪಕ ಅಜಯ್ ದೇವಗನ್ ತಮ್ಮ ಮುಂದಿನ ಚಿತ್ರ ಮೇ ಡೇ ಮೂಲಕ ಬಿಗ್ ಬಿ ಅಮಿತಾಬ್ ಬಚ್ಚನ್ರಿಗೆ ಆಕ್ಷನ್ ಕಟ್ ಹೇಳಲಿದ್ದಾರೆ.
ಸಿನಿಮಾ ವಿಮರ್ಶಕ ಹಾಗೂ ವ್ಯಾಪಾರ ವಿಶ್ಲೇಶಕ ತರಣ್ ಆದರ್ಶ್ ಟ್ವಿಟರ್ನಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.
ಅಲ್ಲದೇ ಚಿತ್ರದಲ್ಲಿ ಅಜಯ್ ದೇವಗನ್ ಕೂಡ ಪೈಲಟ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅಂತಾ ಹೇಳಿದ್ದಾರೆ. ಚಿತ್ರದ ಉಳಿದ ಪಾತ್ರಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಮೇ ಡೇ ಸಿನಿಮಾಗೆ ಡಿಸೆಂಬರ್ನಿಂದ ಶೂಟಿಂಗ್ ಶುರುವಾಗುವ ಸಾಧ್ಯತೆ ಇದೆ.