ಬಾಲಿವುಡ್ ತಾರೆ ಅಕ್ಷಯ್ ಕುಮಾರ್ ಅವರ ಬಹುನಿರೀಕ್ಷಿತ ಲಕ್ಷ್ಮಿ ಬಾಂಬ್ ಚಲನಚಿತ್ರವು ಸಿನಿಮಾ ಮಂದಿರದಲ್ಲಿ ಬಿಡುಗಡೆಯಾಗುವುದು ಅನುಮಾನ.
ಇತ್ತೀಚಿನ ಮಾಹಿತಿ ಪ್ರಕಾರ ಈ ಚಿತ್ರವನ್ನು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ನಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ನಿರ್ದೇಶಕ ರಾಘವ ಲಾರೆನ್ಸ್ ಮತ್ತು ನಿರ್ಮಾಪಕರು, ಅಕ್ಷಯ್ ಕುಮಾರ್ ಜೊತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಚಿತ್ರಮಂದಿರಗಳು ತೆರೆದಿಲ್ಲ, ಜೊತೆಗೆ ಅವಕಾಶ ಸಿಕ್ಕರೂ ಚಿತ್ರಮಂದಿರಗಳಿಗೆ ಈ ಸಂದರ್ಭದಲ್ಲಿ ಜನ ಬರುವುದು ಅನುಮಾನ. ಈ ಹಿನ್ನೆಲೆಯಲ್ಲಿ ಚಿತ್ರವನ್ನು ವೆಬ್ ನಲ್ಲಿ ನೇರ ಬಿಡುಗಡೆಗೆ ಚರ್ಚೆ ನಡೆಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.