ಹಿರಿಯ ನಟ, ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟ ನಂತರ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.
ನನಗೆ ಮತ್ತು ನನ್ನ ತಂದೆಗೆ ಕೋವಿಡ್-19 ಪಾಸಿಟಿವ್ ವರದಿ ಬಂದಿದೆ. ಇಬ್ಬರಲ್ಲಿಯೂ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದರಿಂದ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಕುಟುಂಬದ ಸದಸ್ಯರು ಮತ್ತು ಸಿಬ್ಬಂದಿಯ ಪರೀಕ್ಷೆಗೆ ಕ್ರಮಕೈಗೊಳ್ಳಲಾಗಿದೆ. ಯಾರು ಗಾಬರಿಯಾಗುವುದು ಬೇಡ. ಶಾಂತವಾಗಿರಿ ಎಂದು ಅಭಿಷೇಕ್ ಬಚ್ಚನ್ ಟ್ವೀಟ್ ಮಾಡಿದ್ದಾರೆ.