ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಕಿರುತೆರೆ ನಿರೂಪಕಿ ಅನುಶ್ರೀ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಇವತ್ತು ಇಲ್ಲವೇ ಸೆಪ್ಟೆಂಬರ್ 26 ರಂದು ಅವರು ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.
ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ಡ್ಯಾನ್ಸರ್ ಕಿಶೋರ್ ಶೆಟ್ಟಿ ಹಾಗೂ ಅಕಿಲ್ ನೌಶಿಲ್ ಅವರು ಪಾರ್ಟಿಗಳಲ್ಲಿ ಅನುಶ್ರೀ ಭಾಗಿಯಾಗಿದ್ದ ನೀಡಿದ ಮಾಹಿತಿ ಆಧರಿಸಿ ನೋಟಿಸ್ ಜಾರಿ ಮಾಡಲಾಗಿದೆ.
ಈ ಕಾರಣದಿಂದ ಅನುಶ್ರೀ ವಿಚಾರಣೆಗೆ ಹಾಜರಾಗಲಿದ್ದಾರೆ. ಅವರಿಗೆ ಸೆಪ್ಟಂಬರ್ 26 ರಂದು ವಿಚಾರಣೆಗೆ ಹಾಜರಾಗಲು ಸಿಸಿಬಿ ಪೊಲೀಸರು ಸೂಚಿಸಿದ್ದು, ಅವರು ಶುಕ್ರವಾರವೇ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಹೇಳಲಾಗಿದೆ.