
ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ಅರವಿಂದ್ ಕೌಶಿಕ್ ಅವರನ್ನು ಬೆಂಗಳೂರಿನ ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಧಾರಾವಾಹಿ ನಿರ್ಮಾಪಕರಿಂದ ಹಣ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ಕೌಶಿಕ್ ಸಿನಿಮಾ, ಧಾರಾವಾಹಿಗಳನ್ನು ನಿರ್ದೇಶನ ಮಾಡಿದ್ದಾರೆ.
‘ನಮ್ ಏರಿಯಾದಲ್ಲಿ ಒಂದು ದಿನ’, ‘ಹುಲಿರಾಯ’, ‘ತುಘಲಕ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಅಲ್ಲದೆ, ‘ಕಮಲಿ’ ಧಾರಾವಾಹಿ ನಿರ್ದೇಶನ ಮಾಡಿದ್ದು, ಈ ಧಾರಾವಾಹಿ ನಿರ್ಮಾಣಕ್ಕೆ ನಿರ್ಮಾಪಕ ರೋಹಿತ್ 83 ಲಕ್ಷ ಹಣ ಹೂಡಿಕೆ ಮಾಡಿದ್ದರು.
2018 ರಲ್ಲಿ ಧಾರಾವಾಹಿ ನಿರ್ಮಾಣಕ್ಕೆ ಹಣ ಹೂಡಿಕೆ ಮಾಡಿದ ರೋಹಿತ್ ಗೆ ಹಣ ವಾಪಸ್ ಕೊಡದೇ, ಲಾಭಾಂಶ ನೀಡದೆ ವಂಚಿಸಿದ್ದಾರೆ ಎಂದು ನಿರ್ಮಾಪಕರು ವೈಯಾಲಿಕಾವಲ್ ಠಾಣೆಗೆ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 506, 420ರ ಅಡಿ ಪ್ರಕರಣ ದಾಖಲಿಸಿಕೊಂಡ ವೈಯಾಲಿಕಾವಲ್ ಠಾಣೆ ಪೊಲೀಸರು ಅರವಿಂದ್ ಕೌಶಿಕ್ ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.