
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದ ನಿರ್ಮಾಪಕ ಬಿ. ವಿಜಯಕುಮಾರ್(63) ಭಾನುವಾರ ನಿಧನರಾಗಿದ್ದಾರೆ.
ನಟ ಸಾಹಸಸಿಂಹ ವಿಷ್ಣುವರ್ಧನ್ ಆಪ್ತರಾಗಿದ್ದ ವಿಜಯಕುಮಾರ್ ಅವರು ‘ಸಿಂಹಾದ್ರಿಯ ಸಿಂಹ’ ಸೇರಿದಂತೆ ಹಲವಾರು ಸಿನಿಮಾ ನಿರ್ಮಾಣ ಮಾಡಿದ್ದಾರೆ. ರೇಷ್ಮೆ ಮಂಡಳಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅನಾರೋಗ್ಯದ ಕಾರಣ ವಿಜಯಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಲಾಗಿದೆ.