
ನವದೆಹಲಿ: ‘ಬಾಹುಬಲಿ’ ಖ್ಯಾತಿಯ ನಟಿ ತಮನ್ನಾ ಅವರ ಪೋಷಕರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ತಮನ್ನಾ ಅವರಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ.
ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು, ನಟಿ ತಮನ್ನಾ ಮತ್ತು ಅವರ ಸಿಬ್ಬಂದಿ ಕೊರೊನಾ ನೆಗೆಟಿವ್ ರಿಪೋರ್ಟ್ ಬಂದಿದೆ. ಆದರೆ ಅವರ ಪೋಷಕರಿಗೆ ಸೋಂಕು ಇರುವುದು ದೃಢಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತಾಗಿ ಮಾಹಿತಿ ಹಂಚಿಕೊಂಡಿರುವ ತಮನ್ನಾ, ಪೋಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅವರ ಪೋಸ್ಟ್ ಗೆ ಸ್ನೇಹಿತರು, ಅಭಿಮಾನಿಗಳು ಪ್ರತಿಕ್ರಿಯಿಸಿ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.