ಬೆಂಗಳೂರು: ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ಬಂಧಿತರಾಗಿದ್ದ ನಟ ಚೇತನ್ ಗೆ ಜಾಮೀನು ಮಂಜೂರು ಮಾಡಲಾಗಿದೆ.
ಬೆಂಗಳೂರಿನ 32ನೇ ಎಸಿಎಂಎಂ ಕೋರ್ಟ್ ನಿಂದ ಚೇತನ್ ಗೆ ಜಾಮೀನು ಮಂಜೂರು ಮಾಡಲಾಗಿದೆ. 25,000 ರೂ. ವೈಯಕ್ತಿಕ ಬಾಂಡ್ ಮತ್ತು ಒಬ್ಬರ ಭದ್ರತೆ ನೀಡಲು ನ್ಯಾಯಾಲಯದಿಂದ ಸೂಚನೆ ನೀಡಲಾಗಿದೆ.
ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪದಡಿ ಶಿವಕುಮಾರ್ ದೂರು ನೀಡಿದ್ದು, ಶೇಷಾದ್ರಿಪುರಂ ಠಾಣೆ ಪೊಲೀಸರು ಚೇತನ್ ಅವರನ್ನು ಬಂಧಿಸಿದ್ದರು. ಇದೀಗ ಅವರಿಗೆ ಜಾಮೀನು ದೊರೆತಿದೆ.