ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಅವರ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟವಾಗಲಿದೆ.
ಎನ್.ಡಿ.ಪಿ.ಎಸ್. ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಿ.ಎಂ. ಸೀನಪ್ಪ ಇಂದು ತೀರ್ಪು ಪ್ರಕಟಿಸಲಿದ್ದಾರೆ. ರಾಗಿಣಿ ಮತ್ತು ಸಂಜನಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಕಳೆದ ಶುಕ್ರವಾರ ಪೂರ್ಣಗೊಳಿಸಲಾಗಿದೆ.
ಎನ್.ಡಿ.ಪಿ.ಎಸ್. ನ್ಯಾಯಾಲಯ ಜಾಮೀನು ಮಂಜೂರು ಮಾಡದಿದ್ದಲ್ಲಿ ರಾಗಿಣಿ, ಸಂಜನಾ ಅವರು ಜೈಲು ವಾಸ ಮುಂದುವರೆಸಬೇಕಿದೆ. ಬಳಿಕ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಹೇಳಲಾಗಿದೆ.