ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕು ತಗಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡು ಬಂದಿದೆ.
ಅವರ ಪುತ್ರ ಎಸ್.ಪಿ. ಚರಣ್ ಈ ಬಗ್ಗೆ ಮಾಹಿತಿ ನೀಡಿದ್ದು, ತಂದೆಯವರು ಸರಾಗವಾಗಿ ಉಸಿರಾಡಲು ಆರಂಭಿಸಿದ್ದು, ಜನರನ್ನು ಗುರುತಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ತಂದೆಯವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಮಸ್ಯೆ ಕಡಿಮೆಯಾದ ಹಿನ್ನೆಲೆಯಲ್ಲಿ ಬೇರೆ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದೆ. ತಂದೆಯವರ ಆರೋಗ್ಯ ಸ್ಥಿತಿ ತುಂಬಾ ಸುಧಾರಿಸಿದೆ ಎಂದು ಹೇಳಿದ್ದಾರೆ.
ಇನ್ನು ಎಸ್ಪಿಬಿ ಅವರ ಪತ್ನಿಗೂ ಕೊರೊನಾ ಸೋಂಕು ತಗುಲಿದ್ದುವಚಿಕಿತ್ಸೆ ನಂತರದಲ್ಲಿ ಅವರು ಚೇತರಿಸಿಕೊಳ್ಳುತ್ತಿದ್ದು ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆನ್ನಲಾಗಿದೆ.