ಕೋಲ್ಕತ್ತಾ: ಜನಪ್ರಿಯ ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಅವರು ಭಾನುವಾರ ಬೆಳಗ್ಗೆ ಕೋಲ್ಕತ್ತಾದ ಗರ್ಫಾ ಪ್ರದೇಶದಲ್ಲಿನ ತಮ್ಮ ಫ್ಲಾಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪ್ರಾಥಮಿಕ ತನಿಖೆಯ ನಂತರ ಯುವ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
20ರ ಹರೆಯದ ಪಲ್ಲವಿ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೂಡಲೇ ಆಕೆಯನ್ನು ಬಂಗೂರ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದಾಗ್ಯೂ, ವೈದ್ಯರು ಆಕೆ ಮೃತಪಟ್ಟಿರುವುದಾಗಿ ಎಂದು ಘೋಷಿಸಿದ್ದಾರೆ.
ಪಲ್ಲವಿ ಡೇ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಪಲ್ಲವಿ ಅವರು ‘ರೇಶಮ್ ಜಪಿ’, ‘ಸರಸ್ವತಿ ಪ್ರೇಮ್’ ಮತ್ತು ‘ಅಮಿ ಸಿರಾಜರ್ ಬೇಗಂ’ಗಳಲ್ಲಿ ಮಾತ್ರವಲ್ಲದೇ, ‘ಮೊನ್ ಮನೆ ನಾ’ ಚಿತ್ರದಲ್ಲಿ ನಟಿಸಿದ್ದಾರೆ.