ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಸಿನಿಮಾ ಪ್ರದರ್ಶನ ಆರಂಭವಾಗಿದೆ.
ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2’ ಶುಕ್ರವಾರ ಬೆಳಿಗ್ಗೆ ಬಿಡುಗಡೆಯಾಗಿತ್ತು. ಇದರ ಬೆನ್ನಲ್ಲೇ ಪುನೀತ್ ರಾಜಕುಮಾರ್ ಅಕಾಲಿಕ ನಿಧನದಿಂದಾಗಿ ರಾಜ್ಯಾದ್ಯಂತ ಚಿತ್ರಪ್ರದರ್ಶನ ಸ್ಥಗಿತಗೊಳಿಸಲಾಗಿತ್ತು. ಅಂತ್ಯಕ್ರಿಯೆ ಮುಗಿದ ನಂತರ ಕೆಲವೆಡೆ ಚಿತ್ರ ಪ್ರದರ್ಶನ ಆರಂಭವಾಗಿದೆ. ಸೋಮವಾರದಿಂದ ರಾಜ್ಯದ 300ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ಭಜರಂಗಿ 2’ ಮರು ಬಿಡುಗಡೆಯಾಗುತ್ತಿದೆ.
ಪುನೀತ್ ರಾಜಕುಮಾರ್ ಗೌರವಾರ್ಥ ‘ರಾಜಕುಮಾರ’ ಉಚಿತ ಪ್ರದರ್ಶನ ಆಯೋಜಿಸಲಾಗಿದ್ದು, ಇದಾದ ನಂತರ ‘ಭಜರಂಗಿ 2’ ಪ್ರದರ್ಶಿಸಲಾಗುವುದು.