ಮುಂಬೈ: ಬಾಲಿವುಡ್ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಹಾಸ್ಯ ಕಲಾವಿದೆ ಭಾರತಿ ಸಿಂಗ್ ಮತ್ತು ಆಕೆಯ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಬಂಧಿಸಿದ್ದಾರೆ.
ಮುಂಬೈನ ಭಾರತಿ ಸಿಂಗ್ ದಂಪತಿ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮನೆಯಲ್ಲಿ 86.5 ಗ್ರಾಂ ಡ್ರಗ್ಸ್ ಜಪ್ತಿ ಮಾಡಿದ್ದರು. ಡ್ರಗ್ಸ್ ಸೇವನೆ ಬಗ್ಗೆ ಭಾರತಿ ಮತ್ತು ಆಕೆಯ ಪತಿ ತಪ್ಪೊಪ್ಪಿಕೊಂಡಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಮೊದಲಿಗೆ ಶನಿವಾರ ಬೆಳಗ್ಗೆ ಅವರನ್ನು ಕಚೇರಿಗೆ ಕರೆಸಿಕೊಂಡು ವಿಚಾರಣೆ ನಡೆಸಲಾಗಿದ್ದು, ನಂತರ ಅವರು ನೀಡಿದ ಮಾಹಿತಿ ಆಧರಿಸಿ ಸಂಜೆ ವೇಳೆಗೆ ಬಂಧಿಸಿ ಮುಂದಿನ ಕ್ರಮಕೈಗೊಳ್ಳಲಾಗಿದೆ ಎಂದು ಎನ್.ಸಿ.ಬಿ. ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.