
ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ ಕ್ಷೇತ್ರ ವ್ಯಾಪ್ತಿಯ ಯಶವಂತಪುರ, ಲಗ್ಗೆರೆ ವಾರ್ಡ್, ಸಿದ್ಧಾರ್ಥ ನಗರದಲ್ಲಿ ಮತಯಾಚನೆ ಮಾಡಲಿದ್ದಾರೆ.
ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಖುಷ್ಬೂ ನಿನ್ನೆ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಸಂದರ್ಭದಲ್ಲಿ ಅವರನ್ನು ಬಂಧಿಸಲಾಗಿತ್ತು. ಮುನಿರತ್ನ ಸಿನಿಮಾ ನಿರ್ಮಾಪಕರೂ ಆಗಿದ್ದು, ಅವರ ಪರ ಇವತ್ತು ನಟಿ ಖುಷ್ಬೂ ಸೇರಿ ಚಿತ್ರರಂಗದ ಕಲಾವಿದರು ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.