ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಸಿಡಿದೆದ್ದಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿವಾಸಕ್ಕೆ ಈಗ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ.
ದರ್ಶನ್ ವಿರುದ್ಧ ಹಲ್ಲೆ ಆರೋಪ ಹಿನ್ನೆಲೆಯಲ್ಲಿ ಕೋರಮಂಗಲದಲ್ಲಿರುವ ಇಂದ್ರಜಿತ್ ಲಂಕೇಶ್ ನಿವಾಸದ ಸುತ್ತ ಪೊಲೀಸರನ್ನು ನಿಯೋಜಿಸಲಾಗಿದೆ. ಅಭಿಮಾನಿಗಳ ಪ್ರತಿಭಟನೆ ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
BIG BREAKING: ನಟ ದರ್ಶನ್ ವಿರುದ್ಧ ಹಲ್ಲೆ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಅಲ್ಲದೇ ಇಂದ್ರಜಿತ್ ನಿವಾಸದ ಸುತ್ತಮುತ್ತ 2 ಹೊಯ್ಸಳ ವ್ಯಾನ್ ನಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಈ ನಡುವೆ ಮಧ್ಯಾಹ್ನದ ವೇಳೆ ಇಂದ್ರಜಿತ್ ಲಂಕೇಶ್ ಹಾಗೂ ನಟ ದರ್ಶನ್ ಪ್ರತ್ಯೇಕ ಸುದ್ದಿಗೋಷ್ಠಿಗಳನ್ನು ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.