alex Certify BIG NEWS: ದರ್ಶನ್-ಇಂದ್ರಜಿತ್ ಸಂಘರ್ಷ; ಚಿತ್ರರಂಗ ಬೀದಿ ಚರ್ಚೆ ವಿಷಯವಾಗದಿರಲಿ; ಬುದ್ಧಿವಾದ ಹೇಳಿದ ನಟ ಜಗ್ಗೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದರ್ಶನ್-ಇಂದ್ರಜಿತ್ ಸಂಘರ್ಷ; ಚಿತ್ರರಂಗ ಬೀದಿ ಚರ್ಚೆ ವಿಷಯವಾಗದಿರಲಿ; ಬುದ್ಧಿವಾದ ಹೇಳಿದ ನಟ ಜಗ್ಗೇಶ್

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಿನ ಸಂಘರ್ಷಗಳ ಬೆನ್ನಲ್ಲೇ ಹಿರಿಯ ನಟ ಜಗ್ಗೇಶ್, ಕನ್ನಡ ಚಿತ್ರರಂಗದಲ್ಲಿ ತಾವು ಬೆಳೆದುಬಂದ ಹಾದಿ, ಡಾ. ರಾಜ್ ಕುಮಾರ್ ರಿಂದ ಹಿಡಿದು ನಟ ದರ್ಶನ್ ಜೊತೆಗಿನ ತಮ್ಮ ಒಡನಾಟ ಎಲ್ಲವನ್ನೂ ಅರ್ಥಗರ್ಭಿತವಾಗಿ ಬಿಂಬಿಸುವ ಫೋಟೊಗಳನ್ನು ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ತಮ್ಮದೇ ಶೈಲಿಯಲ್ಲಿ ಬುದ್ಧಿವಾದ ಹೇಳಿದ್ದಾರೆ.

ಗುರು ಹಿಂದೆ ಗುರಿ ಮಂದೆ…..ಹಠ ಬಿಡಲಿಲ್ಲಾ ಗಾಂಧಿನಗರ ಅಲೆದು ಚಪ್ಪಲಿ ಸವೆಸಿ ದಡಮುಟ್ಟಿದೆ ಎಂದುಬಿಟ್ಟರೆ ಆತ್ಮ ಧ್ರೋಹ ಆಗಿಬಿಡುತ್ತದೆ ಕಾರಣ ದಡಮುಟ್ಟಿಸಿದ್ದು ಅಂದಿನ ನಿರ್ದೇಶಕರು ನಿರ್ಮಾಪಕರು ಮಾಧ್ಯಮಮಿತ್ರರು ಹಾಗೂ ವಿಶೇಷವಾಗಿ ಸ್ವಾಭಿಮಾನಿ ಕನ್ನಡಿಗರು! ಹೇಳಿ ಹೇಗಿದ್ದರಬೇಕು ಅಪಮಾನ ಅವಮಾನ ಹಸಿವಿನಿಂದ ನಿದ್ರೆಗೆಟ್ಟು ಗೆದ್ದ ಒಬ್ಬ ಸಾಮಾನ್ಯನ ಬದುಕು! ಅಂದು ನಮ್ಮ ಬಗ್ಗೆ ಹೇಳಲು ಇದ್ದದ್ದು ಒಂದೆ ಬರಹಮಾಧ್ಯಮ ಮಾತ್ರ… ನೆನಪಿಡಿ ಇಂದು ನೂರಾರು ಮಾಧ್ಯಮ, ಅಂಗೈಯಲ್ಲೆ ಆಕಾಶ ತೋರಿ ಹತ್ತಾರುವರ್ಷ ಸಾಧನೆ ಕ್ಷಣಮಾತ್ರದಲ್ಲೆ ಅನುಮಾನದಿಂದ ಸಾಧಕನ ನೋಡುವಂತ ಮಾಯಾಜಾಲ ಸಾಮಾಜಿಕ ಜಾಲತಾಣ. ಸಿಕ್ಕಸಿಕ್ಕವರ ಕೈಲಿ ಈ ಜಾಲಸಿಕ್ಕು ವಯಸ್ಸು ಸಾಧನೆ ಅವರ ಮೂಗಿನ ನೇರಕ್ಕೆ ಅವರು ಬದುಕಿದ ಪರಿಸರ ಭಾಷೆಬಳಸಿ ಅವಮಾನ ಮಾಡಿ ವಿಕೃತ ಆನಂದ ಅನುಭವಿಸುವುದು ವಿಪರ್ಯಾಸ ದಿನಗಳು! ಇಂದಿನ ಸಾರ್ವಜನಿಕ ಜೀವನ ಪಬ್ಲಿಕ್ ಟಾಯ್ಲೇಟ್ ನಂತೆ ಆಗಿಬಿಟ್ಟಿದೆ! ಆದರು ವಿಧಿಯಿಲ್ಲಾ ಚರ್ಮ ದಪ್ಪಮಾಡಿ ಬದುಕಬೇಕು! ಎಂದಿದ್ದಾರೆ.

ಭಾನುವಾರವೂ ತೈಲ ಬೆಲೆ ಏರಿಕೆ ಶಾಕ್: ಡೀಸೆಲ್ ದರ ಹೆಚ್ಚಳ, ಪೆಟ್ರೋಲ್ ದರ ಯಥಾಸ್ಥಿತಿ

ಉಧ್ಯಮದ ಕಲಾಬಂಧುಗಳಿಗೆ ನನ್ನ ಸಣ್ಣ ಅನುಭವದ ನುಡಿ! ನಶ್ವರ ಬಣ್ಣದ ಬದುಕು! ಕಲಾವಿದನ ಜೀವನ ನಡೆಯುವವರೆಗೆ ನಾಣ್ಯ ಮಿಕ್ಕಂತೆ ಸವಕಲು! ಎಲ್ಲಿಯವರೆಗೂ ಕಲಾವಿದ ವರ್ಷಕ್ಕೆ ಮಾತ್ರ ಹೊರಬರುವ ಊರ ಮೆರೆದೇವರಂತೆ ಹೊರ ಬರಬೇಕು, ಆಗ ದೇವರಪರ ಅದ್ಭುತ ಅನನ್ಯ! ದಿನ ಆ ದೇವರು ಬೀದಿಗೆ ಬಂದರೆ ಮೌಲ್ಯ ಇರುವುದಿಲ್ಲಾ! ರಾಜನಾಗಲಿ ಸೇವಕನಾಗಲಿ ಜಗಳ ಘರ್ಷಣೆ ಸಹಜ! ಆ ಘರ್ಷಣೆ ನಿಭಾಯಿಸುವ ಕಲೆ ಕರಗತ ಆಗಿರಬೇಕು ಆಗ ಕಾಡ್ಗಿಚ್ಚನ್ನು ತಣ್ಣಗೆ ಮಾಡಬಹುದು! ಹಾಗೆ ಅನ್ಯತ ಭಾವಿಸದೆ ನನ್ನ ಮಾತು ಆಲಿಸಬೇಕು. ಆತ್ಮೀಯ ಮಾಧ್ಯಮಮಿತ್ರರು ಕಲಾರಂಗದ ನಮ್ಮಕಾಯಕ ಜನರಿಗೆ ತಲುಪಿಸೋ ನಾವಿಕರು, ನಾವು ನೀವು ದೇಹದ ಎರಡು ಕಣ್ಣಂತೆ ಯಾವುದಕ್ಕು ನೋವಾದರು ನಮಗೆ ನಷ್ಟ! ದಯಮಾಡಿ ವಿಶೇಷ ಹೃದಯ ನಿಮ್ಮದಾಗಿ ನಮ್ಮ ಚಿತ್ರರಂಗ ಬೀದಿಚರ್ಚೆಗೆ ವಿಷಯವಾಗದಿರಲಿ ಎಂದು ವಿನಂತಿಸಿದ್ದಾರೆ.

ಈಗಾಗಲೆ ಚಿತ್ರರಂಗ ಕೊರೊನಾ ಹೆಮ್ಮಾರಿ ಹೊಡೆತಕ್ಕೆ ನಲುಗಿದೆ ! ಉಧ್ಯಮದ ಹಿರಿಯರು ವಾಣಿಜ್ಯಮಂಡಲಿ ಮಧ್ಯಪ್ರವೇಶಿಸಿ ಒಡೆದ ಮನಗಳ ಸರಿಮಾಡಿ ಎಂದು ಮನವಿ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...