ಬೆಂಗಳೂರು: ನಾನು ಕನ್ನಡ ಚಿತ್ರರಂಗಕ್ಕೆ ಬಂದು 12 ವರ್ಷ ಆಗಿದೆ. ನಾನೇನು ಎಂಬುದು ಎಲ್ಲರಿಗೂ ಗೊತ್ತಿದೆ. ಈ ಪ್ರಕರಣದಲ್ಲಿ ಏನಾಗಿದೆ ಎಂಬುದೂ ಗೋತ್ತಿದೆ ಎಂದು ಹೇಳುವ ಮೂಲಕ ಡ್ರಗ್ಸ್ ಪ್ರಕರಣದಲ್ಲಿ ತನ್ನನ್ನು ಬಲಿಪಶು ಮಾಡಿದ್ದಾರೆ ಎಂದು ನಟಿ ರಾಗಿಣಿ ಪರೋಕ್ಷವಾಗಿ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ರಾಗಿಣಿ, ಇಂದು ವಿಚಾರಣೆಗಾಗಿ ಕೋರ್ಟ್ ಗೆ ಹಾಜರಾಗಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಕರಣದಿಂದಾಗಿ ನಾನು ಹಾಗೂ ನನ್ನ ಕುಟುಂಬ ತುಂಬಾ ನೊಂದಿದೆ. ಪ್ರಕರಣದಲ್ಲಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಬೇರೆಯವರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ ಎಂದರು.
ಸಲ್ಮಾನ್ ಖಾನ್ಗೆ ʼಲವ್ ಯೂʼ ಹೇಳಿದ್ರಾ ಈ ಖ್ಯಾತ ಗಾಯಕಿ..?
ನನಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆಯಿದೆ. ನಾನು ತಪ್ಪು ಮಾಡಿಲ್ಲ ಎಂದು ಮತ್ತೆ ವಿವರಣೆ ನಿಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಒಂದಿಷ್ಟು ವಿಚಾರಗಳನ್ನು ಹೇಳುತ್ತೇನೆ ಎಂದು ಹೇಳಿದರು.