alex Certify BREAKING NEWS: ‘ಬಿಗ್ ಬಾಸ್’ಗೆ ಅನಿರೀಕ್ಷಿತ ತಿರುವು, ನಾಳೆಗೇ ಶೋ ಅಂತ್ಯ -72 ನೇ ದಿನಕ್ಕೆ ಸೀಸನ್ ಮುಕ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ‘ಬಿಗ್ ಬಾಸ್’ಗೆ ಅನಿರೀಕ್ಷಿತ ತಿರುವು, ನಾಳೆಗೇ ಶೋ ಅಂತ್ಯ -72 ನೇ ದಿನಕ್ಕೆ ಸೀಸನ್ ಮುಕ್ತಾಯ

ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ 72ನೇ ದಿನಕ್ಕೆ ಅಂತ್ಯವಾಗ್ತಿದೆ. ‘ಬಿಗ್ ಬಾಸ್’ ಆರಂಭವಾಗಿ 71ನೇ ದಿನಕ್ಕೆ ಮುಕ್ತಾಯವಾಗಲಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ ಡೌನ್ ಜಾರಿ ಮಾಡಿದ್ದು, ಕಿರುತೆರೆ ಧಾರಾವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿದೆ. ಈ ಕಾರಣದಿಂದ ‘ಬಿಗ್ ಬಾಸ್’ ಶೋ ನಾಳೆಗೆ ಮುಕ್ತಾಯವಾಗಲಿದೆ.

‘ಬಿಗ್ ಬಾಸ್’ ಹೋಸ್ಟ್ ಮಾಡುತ್ತಿದ್ದ ನಟ ಸುದೀಪ್ ಅವರು ಅನಾರೋಗ್ಯದ ಕಾರಣ ಎರಡು ವಾರ ವಾರಾಂತ್ಯ ಸಂಚಿಕೆಗಳನ್ನು ನಡೆಸಿಕೊಡಲು ಬಂದಿರಲಿಲ್ಲ. ಮೂರನೇ ವಾರ ಕೊರೋನಾ ಕಾರಣಕ್ಕೆ ಶೂಟಿಂಗ್ ಸ್ಥಗಿತಗೊಳಿಸಲಾಗಿತ್ತು. ಈಗ ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿರುವುದರಿಂದ ‘ಬಿಗ್ ಬಾಸ್’ ಸೀಸನ್ ಅಂತ್ಯವಾಗುತ್ತಿದೆ. ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಮಾಹಿತಿ ನೀಡಿದ್ದಾರೆ. ನಾಳೆಗೆ ಬಿಗ್ ಬಾಸ್ ಅಂತ್ಯವಾಗುತ್ತದೆ ಎಂದು ಹೇಳಿದ್ದಾರೆ.

‘ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್‍ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು ನೋಡಿದಾಗ ಒಂದಕ್ಕಿಂತ ಹೆಚ್ಚು ಭಾವನೆಗಳು ಒಂದೇ ಸಲಕ್ಕೆ ಬಂದು ಮನಸ್ಸಿಗೆ ವಿಚಿತ್ರವಾದ ತಳಮಳ. ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲಾ ಖುಷಿಯಾಗಿದ್ದಾರೆ. ಐಸೋಲೇಷನ್ನಿನಲ್ಲಿ ಇರುವುದರಿಂದ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತಿದ್ದೇವೆ. ಅನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಆಗುತ್ತಿದೆ.

ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ.

ಮನಸ್ಸು ಭಾರವಾಗಿದೆ. ಈ ಶೋ ನಿಲ್ಲುತ್ತಿದೆ ಅಂತಲ್ಲ. ಹೊರಗಡೆ ಗಾಳಿಯಲ್ಲಿ ಓಡಾಡುತ್ತಿರುವ ಕಣ್ಣಿಗೆ ಕಾಣದ ಅನಿಶ್ಚಿತತೆಯಿಂದ ಇನ್ನಿಲ್ಲದ ಕಳವಳ. ಎಲ್ಲರಿಗೂ ಈ ಕಳವಳಕ್ಕೊಂದು ಉತ್ತರ ಬೇಗ ಸಿಗಲಿ. ಸುರಕ್ಷಿತವಾಗಿರಿ ಎಂದು ಅವರು ಹೇಳಿದ್ದಾರೆ.

ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್‍ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು ನೋಡಿದಾಗ…

Posted by Parameshwar Gundkal on Saturday, May 8, 2021

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...