ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಬಂಧನ ಎಲ್ಲೆಡೆ ಚರ್ಚೆಯಾಗ್ತಿದೆ. ಈ ವರ್ಷ ಫೆಬ್ರವರಿಯಲ್ಲಿ ರಾಜ್ ಕುಂದ್ರಾ ವಿರುದ್ಧ ದೂರು ದಾಖಲಾಗಿತ್ತು. ರಾಜ್ ಕುಂದ್ರಾ ವಿರುದ್ಧ ಅಶ್ಲೀಲ ಚಿತ್ರ ನಿರ್ಮಾಣ ಹಾಗೂ ಮೊಬೈಲ್ ಮೂಲಕ ಚಿತ್ರ ಮಾರಾಟದ ಗಂಭೀರ ಆರೋಪ ಕೇಳಿ ಬಂದಿದೆ.
ರಾಜ್ ಕುಂದ್ರಾ ತಪ್ಪಿತಸ್ಥರೆಂದು ಸಾಭೀತಾದಲ್ಲಿ ಎಷ್ಟು ವರ್ಷ ಜೈಲು ಶಿಕ್ಷೆಯಾಗಲಿದೆ ಎಂಬ ಬಗ್ಗೆಯೂ ಚರ್ಚೆಯಾಗ್ತಿದೆ.
ಅಶ್ಲೀಲ ಚಿತ್ರ ಪ್ರಕರಣದಲ್ಲಿ ರಾಜ್ ಕುಂದ್ರಾ ತಪ್ಪಿತಸ್ಥರೆಂದು ಸಾಬೀತಾದರೆ, ಕಠಿಣ ಜೈಲು ಶಿಕ್ಷೆ ಎದುರಿಸಬೇಕಾಗುತ್ತದೆ. ಅಶ್ಲೀಲತೆಗೆ ಸಂಬಂಧಿಸಿದಂತೆ ನಮ್ಮ ದೇಶದ ಕಾನೂನು ತುಂಬಾ ಕಟ್ಟುನಿಟ್ಟಾಗಿದೆ. ಅಶ್ಲೀಲತೆಯ ಪ್ರಕರಣದಲ್ಲಿ ಐಟಿ ಕಾಯ್ದೆಯ ಜೊತೆಗೆ ಐಪಿಸಿಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಐಟಿ ಕಾಯ್ದೆ 20098 ರ ಸೆಕ್ಷನ್ 67 ಎ ಮತ್ತು ಐಪಿಸಿಯ ಸೆಕ್ಷನ್ 292, 293, 294, 500, 506 ಮತ್ತು 509 ರ ಅಡಿಯಲ್ಲಿ ಐದು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದ. ಜೊತೆಗೆ 10 ಲಕ್ಷ ವರೆಗೆ ದಂಡ ವಿಧಿಸಲು ಅವಕಾಶವಿದೆ. ಎರಡನೇ ಬಾರಿಗೆ ಸಿಕ್ಕಿಬಿದ್ದರೆ, ಶಿಕ್ಷೆ 7 ವರ್ಷಗಳವರೆಗೆ ಹೆಚ್ಚಾಗುತ್ತದೆ.