ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರ ಆರೋಗ್ಯ ಸ್ಥಿರವಾಗಿದೆ ಎಂದು ನಾನಾವತಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಶೀಘ್ರವೇ ಗುಣಮುರಾಗಲೆಂದು ಬಾಲಿವುಡ್ ಸೆಲೆಬ್ರಿಟಿಗಳಾದ ಮಾಧುರಿ ದೀಕ್ಷಿತ್, ತಾಪ್ಸೀ, ಸೋನಂ ಕಪೂರ್, ಶಾಹಿದ್ ಕಪೂರ್, ರಿತೇಶ್ ದೇಶ್ಮುಖ್ ಸೇರಿದಂತೆ ಹಲವರು ಹಾರೈಸಿದ್ದಾರೆ.
ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಅವರಿಗೆ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆ ಮಾಡಿಸಲಾಗಿದ್ದು, ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುಟುಂಬದ ಸದಸ್ಯರು ಮತ್ತು ಸಿಬ್ಬಂದಿಯ ಕೋವಿಡ್ ಪರೀಕ್ಷೆ ವರದಿಗೆ ಕಾಯಲಾಗುತ್ತಿದೆ ಎನ್ನಲಾಗಿದೆ.