alex Certify BREAKING: ತಡರಾತ್ರಿ ನಟ, ‘ಬಿಗ್ ಬಾಸ್’ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತಡರಾತ್ರಿ ನಟ, ‘ಬಿಗ್ ಬಾಸ್’ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಹಲ್ಲೆ

ಬೆಂಗಳೂರು: ನಟ, ‘ಬಿಗ್ ಬಾಸ್’ ಸ್ಪರ್ಧಿ ಕಿರಿಕ್ ಕೀರ್ತಿ ಅವರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ನಿನ್ನೆ ರಾತ್ರಿ ಕಿರಿಕ್ ಕೀರ್ತಿ ಸ್ನೇಹಿತರ ಜೊತೆಗೆ ಇದ್ದರು. ಈ ವೇಳೆ ಅವರ ಫೋಟೊ ಕ್ಲಿಕ್ಕಿಸಿದ್ದಕ್ಕೆ ಜಗಳವಾಗಿದೆ. ಪಕ್ಕದ ಟೇಬಲ್ ನಲ್ಲಿದ್ದ ವ್ಯಕ್ತಿ ಫೋಟೋ ಕ್ಲಿಕ್ಕಿಸಿದ್ದನ್ನು ಕೀರ್ತಿ ಪ್ರಶ್ನೆ ಮಾಡಿದ್ದಾರೆ. ಫೋಟೋ ಕ್ಲಿಕ್ಕಿಸಿದ ವ್ಯಕ್ತಿ ಕ್ಷಮೆ ಕೇಳಿದರೂ ಬಿಡದೆ ಕಿರಿಕ್ ಕೀರ್ತಿ ಬಾಯಿಗೆ ಬಂದಂತೆ ಮಾತನಾಡಿದ್ದಾರೆ.

ಆ ನಂತರ ವ್ಯಕ್ತಿಯ ಮೊಬೈಲ್ ಕಸಿದುಕೊಳ್ಳಲು ಕೀರ್ತಿ ಪ್ರಯತ್ನ ನಡೆಸಿದ್ದಾರೆ. ಈ ವೇಳೆ ರೋಸಿ ಹೋದ ವ್ಯಕ್ತಿ ಕೀರ್ತಿ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿದ್ದಾನೆ. ಕೀರ್ತಿಗೆ ತಲೆಗೆ ಪೆಟ್ಟುಬಿದ್ದಿದೆ. ನಿನ್ನೆ ತಡರಾತ್ರಿ 12.30 ರ ಸುಮಾರಿಗೆ ಘಟನೆ ನಡೆದಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹಲ್ಲೆ ನಡೆಸಿದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ಹೇಳಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...