alex Certify BREAKING NEWS: ಖ್ಯಾತ ಬಾಲಿವುಡ್‌ ನಟ ಇರ್ಫಾನ್‌ ಖಾನ್‌ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಖ್ಯಾತ ಬಾಲಿವುಡ್‌ ನಟ ಇರ್ಫಾನ್‌ ಖಾನ್‌ ಇನ್ನಿಲ್ಲ

ಖ್ಯಾತ ಬಾಲಿವುಡ್‌ ನಟ ಇರ್ಫಾನ್‌ ಖಾನ್‌ ವಿಧಿವಶರಾಗಿದ್ದಾರೆ. 54 ವರ್ಷದ ಇರ್ಫಾನ್‌ ಖಾನ್ ಅವರ‌ ಆರೋಗ್ಯ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಇರ್ಫಾನ್‌ ಖಾನ್‌ ಅಮೆರಿಕಾದಲ್ಲಿ ಚಿಕಿತ್ಸೆ ಪಡೆದುಕೊಂಡ ಬಳಿಕ ಚೇತರಿಸಿಕೊಂಡಿದ್ದು, ಭಾರತಕ್ಕೆ ಹಿಂದಿರುಗಿದ ನಂತರ ʼಇಂಗ್ಲೀಷ್‌ ಮೀಡಿಯಂʼ ಎಂಬ ಚಿತ್ರದಲ್ಲಿ ನಟಿಸಿದ್ದರು.

ಕೆಲ ದಿನಗಳ ಹಿಂದಷ್ಟೆ ಇರ್ಫಾನ್ ಖಾನ್ ಅವರ ತಾಯಿ ನಿಧನರಾಗಿದ್ದಾರೆ. ಮನೆಯಿಂದ ದೂರವಿದ್ದ ನಟ ಇರ್ಫಾನ್ ಖಾನ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ತಾಯಿಗೆ ಅಂತಿಮ ನಮನ ಸಲ್ಲಿಸಿದ್ದರು. ಇದಾದ ಮರು ದಿನವೇ ಇರ್ಫಾನ್ ಖಾನ್ ಆರೋಗ್ಯ ಪರಿಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ಮುಂಬೈನ ಕೋಕಿಲಾ ಬೆನ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...