ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಬೆಟ್ಟದ ಹೂವು ಖ್ಯಾತಿಯ ಶಂಖನಾದ ಅರವಿಂದ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಪೋಷಕ ಪಾತ್ರಗಳಿಗೆ ಜೀವ ತುಂಬುತ್ತಿದ್ದ ಅರವಿಂದ್ 250ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಅವರು ಕಳೆದ 10 ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಉಸಿರಾಟದ ತೊಂದರೆ ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿಯೇ ಅರವಿಂದ್ ಕೊನೆಯುಸಿರೆಳೆದಿದ್ದಾರೆ. ಶಂಖನಾದ ಅರವಿಂದ್ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
![](https://kannadadunia.com/wp-content/uploads/2021/05/03-shankhanada1.jpg.jpg)