alex Certify ಕಾವೇರಿ ಹೋರಾಟಕ್ಕೆ ಶಿವರಾಜ್ ಕುಮಾರ್ ಬೆಂಬಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ ಹೋರಾಟಕ್ಕೆ ಶಿವರಾಜ್ ಕುಮಾರ್ ಬೆಂಬಲ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ರೈತ ದೇಶದ ಬೆನ್ನೆಲುಬು, ಆ ರೈತರ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ ಬಾರಿ ಮಳೆಯ ಅಭಾವ ಇದ್ದು ರೈತರು ಸಂಕಷ್ಟದಲ್ಲಿದ್ದಾರೆ. ಎರಡೂ ರಾಜ್ಯದ ನಾಯಕರು ಹಾಗೂ ನ್ಯಾಯಾಲಯ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಒಂದು ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕೆಂಬುದು ನನ್ನ ಪ್ರಾರ್ಥನೆ ಎಂದು ತಿಳಿಸಿದ್ದಾರೆ. ಈ ಕುರಿತಾಗಿ ಶಿವರಾಜ್ ಕುಮಾರ್ ಅವರು ಎಕ್ಸ್ ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರೈತರು ಹೋರಾಟ ನಡೆಸಿದ್ದು, ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಬೆಂಬಲ ನೀಡಿವೆ. ಕನ್ನಡ ಚಿತ್ರರಂಗದ ನಟ, ನಟಿಯರು ಕಾವೇರಿ ಹೋರಾಟಕ್ಕೆ ಬೆಂಬಲಿಸುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ನಟರಾದ ಸುದೀಪ್ ಮತ್ತು ದರ್ಶನ್ ಕಾವೇರಿ ಹೋರಾಟ ಬೆಂಬಲಿಸಿದ್ದಾರೆ. ಚಿತ್ರರಂಗದ ಅನೇಕ ಕಲಾವಿದರು, ಪ್ರತಿನಿಧಿಗಳು ಕೂಡ ಕಾವೇರಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...