ಬೆಂಗಳೂರು: ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಸಿಸಿಬಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ರಾಧಿಕಾ ಕುಮಾರಸ್ವಾಮಿ ಅವರ ಖಾತೆಗೆ ಯುವರಾಜ್ ಸ್ವಾಮಿ 75 ಲಕ್ಷ ರೂಪಾಯಿ ಜಮಾ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಕರೆದಿದ್ದಾರೆ ಎಂದು ಹೇಳಲಾಗಿದೆ.
‘ನಾಟ್ಯರಾಣಿ ಶಾಂತಲಾ’ ಸಿನಿಮಾಕ್ಕಾಗಿ ಈ ಹಣ ಖಾತೆಗೆ ಜಮಾ ಮಾಡಲಾಗಿದೆ ಎಂದು ರಾಧಿಕಾ ಕುಮಾರಸ್ವಾಮಿ ಹೇಳಿದ್ದು, ಈ ಕುರಿತಾಗಿ ಯಾವುದೇ ಅಗ್ರಿಮೆಂಟ್ ಮಾಡಿಕೊಂಡಿಲ್ಲವೆನ್ನಲಾಗಿದೆ.