ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಒರಾಯನ್ ಮಾಲ್ ಪಿವಿಆರ್ ಚಿತ್ರಮಂದಿರದಲ್ಲಿ ‘777 ಚಾರ್ಲಿ’ ಚಿತ್ರ ವೀಕ್ಷಿಸಿದರು.
ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಸಿಎಂ ಇಂದು ಚಿತ್ರತಂಡದ ಆಹ್ವಾನದ ಮೇರೆಗೆ ಸಿನಿಮಾ ನೋಡಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ, ಬಿ.ಸಿ. ನಾಗೇಶ್, ಶಾಸಕ ರಘುಪತಿ ಭಟ್, ಚಿತ್ರದ ನಾಯಕ ರಕ್ಷಿತ್ ಶೆಟ್ಟಿ ಮತ್ತು ಚಿತ್ರ ತಂಡದವರು ಉಪಸ್ಥಿತರಿದ್ದರು. ‘777 ಚಾರ್ಲಿ’ ಚಿತ್ರಕ್ಕೆ ಪ್ರೇಕ್ಷರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಬಿಡುಗಡೆಯಾದಲ್ಲೆಲ್ಲಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ.