ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ವಿಧಿವಶರಾದ ಹಿನ್ನೆಲೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರಿನ ಬಸವನಗುಡಿಯಲ್ಲಿರುವ ನಿವಾಸದಲ್ಲಿ ಅಪಾರ ಬಂಧು-ಬಳಗದವರು, ಅಭಿಮಾನಿಗಳು ಅಂತಿಮ ದರ್ಶನ ಪಡೆದಿದ್ದಾರೆ. ಬೆಳಗ್ಗೆ 9 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಹೃದಯಾಘಾತದಿಂದ ನಿನ್ನೆ ಮಧ್ಯಾಹ್ನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದ ಪುತ್ರನ ಪಾರ್ಥಿವ ಶರೀರದ ಮುಂದೆ ಚಿರು ಅವರ ತಾಯಿ, ಪತ್ನಿ ಕಣ್ಣೀರಿಟ್ಟಿದ್ದಾರೆ. ಸಹೋದರ ಧ್ರುವ ಸರ್ಜಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಟರಾದ ದರ್ಶನ್, ಉಪೇಂದ್ರ, ರಾಘವೇಂದ್ರ ರಾಜ್ ಕುಮಾರ್, ಸೃಜನ್ ಲೋಕೇಶ್, ನಟಿ ತಾರಾ ಮೊದಲಾದವರು ನಿವಾಸದ ಬಳಿ ಅಂತಿಮ ದರ್ಶನ ಪಡೆದು ಕಂಬನಿ ಮಿಡಿದಿದ್ದಾರೆ. ಚಿತ್ರರಂಗದ ಗಣ್ಯರು, ಅಭಿಮಾನಿಗಳು ಅಂತಿಮ ದರ್ಶನ ಪಡೆದಿದ್ದು ಚಿರಂಜೀವಿ ಸರ್ಜಾ ನಿವಾಸದಲ್ಲಿ ಶೋಕ ಮಡುಗಟ್ಟಿದೆ.