alex Certify ನಟ ಚಿರಂಜೀವಿ ಸರ್ಜಾ ಅಕಾಲಿಕ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ಚಿರಂಜೀವಿ ಸರ್ಜಾ ಅಕಾಲಿಕ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

ಬೆಂಗಳೂರು: ಯುವ, ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಹಲವಾರು ಜನಪ್ರಿಯ ಹಾಗೂ ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿರುವ ಅವರು, ಇನ್ನೂ ಪ್ರವರ್ಧಮಾನಕ್ಕೆ ಬರಬೇಕಿದ್ದ, ಉಜ್ವಲ ಭವಿಷ್ಯವನ್ನು ಹೊಂದಿದ್ದ ಕಲಾವಿದ. ಅವರ ನಿಧನದಿಂದ  ಕನ್ನಡ ಚಲನಚಿತ್ರ ರಂಗ ಓರ್ವ ಉತ್ತಮ ನಟನನ್ನು ಕಳೆದುಕೊಂಡಂತಾಗಿದೆ ಎಂದು ಹೇಳಿದ್ದಾರೆ.

ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...