alex Certify ಚಿರು ಅಂತ್ಯಕ್ರಿಯೆ: ಧ್ರುವ ಸರ್ಜಾ ಬೇಡಿಕೆಗೆ ಕುಟುಂಬದವರ ಸಮ್ಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿರು ಅಂತ್ಯಕ್ರಿಯೆ: ಧ್ರುವ ಸರ್ಜಾ ಬೇಡಿಕೆಗೆ ಕುಟುಂಬದವರ ಸಮ್ಮತಿ

ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ವಿಧಿವಶರಾದ ಹಿನ್ನೆಲೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ. ಶಕ್ತಿ ಪ್ರಸಾದ್ ಅವರ ಹುಟ್ಟೂರು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿತ್ತಾದರೂ, ಸಹೋದರ ಧ್ರುವ ಸರ್ಜಾ ಬೇಡಿಕೆಯಂತೆ ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ತನ್ನ ಜೊತೆ ಸಹೋದರ ಇರಬೇಕೆಂದು ಧ್ರುವ ಸರ್ಜಾ ಬೇಡಿಕೆ ಇಟ್ಟಿದ್ದಾರೆ. ನಟ ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಯಲಿದೆ. ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆಗೆ ಮಾವ ಹಾಗೂ ನಟರಾದ ಅರ್ಜುನ್ ಸರ್ಜಾ ಹಾಗೂ ಕುಟುಂಬಸ್ಥರು ಕೂಡ ಸಮ್ಮತಿ ಸೂಚಿಸಿದ ಹಿನ್ನೆಲೆಯಲ್ಲಿ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ಕನಕಪುರ ರಸ್ತೆಯ ನೆಲಗುಳಿ ಸಮೀಪ ಇರುವ ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ.  ಇಂದು ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರವನ್ನು ಫಾರ್ಮ್ ಹೌಸ್ ಗೆ ತರಲಿದ್ದು, ಅಂತಿಮ ವಿಧಿವಿಧಾನಗಳ ನಂತರ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...