ಬೆಂಗಳೂರು: ಇತ್ತೀಚೆಗೆ ನಿಧನರಾದ ಖ್ಯಾತ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ವೇಳೆಯಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಅಭಿಮಾನಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಅಭಿಮಾನಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬನಶಂಕರಿ, ಕುಮಾರಸ್ವಾಮಿ ಲೇಔಟ್, ತಲಘಟ್ಟಪುರ ಠಾಣೆಗಳಲ್ಲಿ 59 ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
ಜೂನ್ 7 ರಂದು ಹೃದಯಘಾತದಿಂದ ಚಿರಂಜೀವಿ ಸರ್ಜಾ ಮೃತಪಟ್ಟಿದ್ದು ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು, ಸ್ನೇಹಿತರು ಬನಶಂಕರಿಯ ನಿವಾಸದ ಬಳಿ ಜಮಾಯಿಸಿದ್ದರು. ಕೊರೊನಾ ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಮಾರ್ಗಸೂಚಿ ನೀಡಿದೆ. ಆದರೆ ಕೆಲವರು ಮಾಸ್ಕ್ ಧರಿಸದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.