
ಮುಂಬೈ: ಖ್ಯಾತ ನೃತ್ಯ ಸಂಯೋಜಕ ರೆಮೋ ಡಿಸೋಜ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲಾಸ್ಟಿ ಪ್ರಕ್ರಿಯೆಗೆ ಒಳಗಾದ ಅವರ ಆರೋಗ್ಯ ಸ್ಥಿರವಾಗಿದೆ.
ಶುಕ್ರವಾರ ಅವರಿಗೆ ಹೃದಯಾಘಾತವಾದ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲಾಸ್ಟಿ ಪ್ರಕ್ರಿಯೆಗೆ ಒಳಗಾದ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ರೆಮೋ ಅವರು ‘ಸ್ಟ್ರೀಟ್ ಡ್ಯಾನ್ಸರ್’, ‘ರೇಸ್ 3’ ಮೊದಲಾದ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.