ಬೆಂಗಳೂರು: ಸಿನಿಮಾ ಥಿಯೇಟರ್ ಗಳ ಮೇಲೆ ಹೇರಲಾಗಿದ್ದ ನಿರ್ಬಂಧ ತೆರವುಗೊಳಿಸಲು ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗುವುದು ಎನ್ನಲಾಗಿದೆ.
ಕೋವಿಡ್ ಕಾರಣದಿಂದಾಗಿ ಥಿಯೇಟರ್ ಗಳಿಗೆ ನಿರ್ಬಂಧ ಹೇರಿದ್ದು, ಶೇಕಡ 50 ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಕೊರೋನಾ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಿಗೆ ವಿಧಿಸಿದ್ದ ಶೇಕಡ 50 ರಷ್ಟು ಪ್ರೇಕ್ಷಕರೊಂದಿಗೆ ವೀಕ್ಷಣೆಗೆ ನಿರ್ಬಂಧ ತೆರವು ಮಾಡಲು ಬಿಬಿಎಂಪಿ ಒಪ್ಪಿಗೆ ನೀಡಿದೆ.
ಸರ್ಕಾರ, ತಜ್ಞರ ಸಮಿತಿಯೊಂದಿಗೆ ಚರ್ಚೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು. ಸಿನಿಮಾ ಥಿಯೇಟರ್ ಗಳ ಜೊತೆಗೆ ಪಬ್ ಗಳಿಗೂ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರ ಭರ್ತಿಗೆ ಅವಕಾಶ ನೀಡಿದಲ್ಲಿ ಹೆಚ್ಚಿನ ಸಂಖ್ಯೆಯ ಸಿನಿಮಾಗಳು ಬಿಡುಗಡೆಯಾಗಲಿವೆ. ಸ್ಟಾರ್ ನಟರ ಸಾಲು ಸಾಲು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರಮಂದಿರ ಹೌಸ್ ಫುಲ್ ಗೆ ಅವಕಾಶ ನೀಡಿದಲ್ಲಿ ಬಿಗ್ ಬಜೆಟ್ ಚಿತ್ರಗಳು ತೆರೆ ಕಾಣಲಿವೆ, ಅಭಿಮಾನಿಗಳು, ಸಿನಿ ರಸಿಕರು ಚಿತ್ರಮಂದಿರಗಳತ್ತ ಮುಖ ಮಾಡಲಿದ್ದಾರೆ.