ಬೆಂಗಳೂರು: ಥಿಯೇಟರ್ ಗಳಳಲ್ಲಿ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಿರುವ ರಾಜ್ಯ ಸರ್ಕಾರದ ಆದೇಶದಿಂದ ಚಿತ್ರರಂಗ ಬೇಸರಗೊಂಡಿದೆ.
ಇಂದು ಮುಖ್ಯಮಂತ್ರಿಯವರನ್ನು ಫಿಲಂ ಚೇಂಬರ್ ನಿಯೋಗ ಭೇಟಿ ಮಾಡಲಿದ್ದು, ಆದೇಶವನ್ನು ಮರು ಪರಿಶೀಲಿಸಲು ಮನವಿ ಮಾಡಲಾಗುತ್ತದೆ. ಕೇಂದ್ರದ ಆದೇಶದನ್ವಯ ಚಿತ್ರಮಂದಿರದಲ್ಲಿ ಸಂಪೂರ್ಣ ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದ್ದು, ರಾಜ್ಯಸರ್ಕಾರ ಕೋರೋನಾ ಕಾರಣದಿಂದ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಬಜೆಟ್ ಚಿತ್ರಗಳಿಗೆ ಬಿಗ್ ಶಾಕ್ ಆಗಿದ್ದು, ಸರ್ಕಾರಕ್ಕೆ ನಿರ್ಧಾರ ಪರಿಶೀಲಿಸುವಂತೆ ಮನವಿ ಮಾಡಲಾಗುವುದು ಎಂದು ಹೇಳಲಾಗಿದೆ.
ಭಾರತ ಸರ್ಕಾರದ ಮಾಹಿತಿ ಹಾಗೂ ಪ್ರಸರಣ ಮಂತ್ರಾಲಯ ಮಾರ್ಗಸೂಚಿಯಂತೆ ಸಿನಿಮಾ ಹಾಲ್ ಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ರಾಜ್ಯದಲ್ಲಿ ಕೊರೋನಾ ಪ್ರಸ್ತುತ ಪರಿಸ್ಥಿತಿಯನ್ನು ಮತ್ತು ಎರಡನೇ ಅಲೆ ಸಾಧ್ಯತೆಯನ್ನು ಪರಿಗಣಿಸಿ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಫೆಬ್ರವರಿ 28 ರ ವರೆಗೆ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಮಾತ್ರವೇ ಅವಕಾಶ ಕಲ್ಪಿಸಲು ಸೂಚನೆ ನೀಡಲಾಗಿದೆ.