alex Certify 3 ದಿನದ ಟಿಕೆಟ್ ಕೊಟ್ಟ ನಂತ್ರ ಥಿಯೇಟರ್ ಗಳಲ್ಲಿ ಶೇ. 50 ರಷ್ಟು ಮಿತಿಗೆ ‘ಯುವರತ್ನ’ ಪುನೀತ್ ರಾಜಕುಮಾರ್ ಅಸಮಾಧಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

3 ದಿನದ ಟಿಕೆಟ್ ಕೊಟ್ಟ ನಂತ್ರ ಥಿಯೇಟರ್ ಗಳಲ್ಲಿ ಶೇ. 50 ರಷ್ಟು ಮಿತಿಗೆ ‘ಯುವರತ್ನ’ ಪುನೀತ್ ರಾಜಕುಮಾರ್ ಅಸಮಾಧಾನ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದು, ಬಿಡುಗಡೆಯಾದಲ್ಲೆಲ್ಲಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆದರೆ, ಇದೇ ಹೊತ್ತಲ್ಲಿ ಕೊರೋನಾ ಹೆಚ್ಚಾಗಿರುವ ರಾಜ್ಯದ 8 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಮಿತಿ ಹೇರಲಾಗಿದೆ.

ಇದಕ್ಕೆ ನಟ ಪುನೀತ್ ರಾಜ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದು, ಶೇಕಡ 100 ರಷ್ಟು ಅವಕಾಶ ಮುಂದುವರೆಸಬೇಕೆಂದು ಮನವಿ ಮಾಡಿದ್ದಾರೆ. ಅವರು ಸಾಮಾಜಿಕ ಜಾಲ ತಾಣ ಫೇಸ್ ಬುಕ್ ಲೈವ್ ನಲ್ಲಿದ್ದಾಗಲೇ ರಾಜ್ಯದ 8 ಜಿಲ್ಲೆಗಳಲ್ಲಿ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ ಎನ್ನುವ ಮಾಹಿತಿ ಬಂದಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದಯವಿಟ್ಟು ಥಿಯೇಟರ್ ಗಳಿಗೆ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದು, ಶೇಕಡ 50 ರಷ್ಟು ನಿರ್ಬಂಧ ಬೇಡವೆಂದು ಅವರು ಹೇಳಿದ್ದಾರೆ.

ಚಿತ್ರರಂಗ ಈಗಷ್ಟೇ ಚೇತರಿಕೆ ಕಾಣುತ್ತಿದೆ. ಇಂತಹ ಸಂದರ್ಭದಲ್ಲಿ ಜನ ಚಿತ್ರಮಂದಿರಗಳಿಗೆ ಬರುತ್ತಿದ್ದಾರೆ. ಬರುವವರು ನಿಯಮಗಳನ್ನು ಕೂಡ ಪಾಲಿಸುತ್ತಿದ್ದಾರೆ. ಮಕ್ಕಳು, ಪೋಷಕರು ಎಲ್ಲರೂ ನಿಯಮ ಪಾಲಿಸುತ್ತಿದ್ದು, ಹಾಗಾಗಿ ಶೇಕಡ 50 ರಷ್ಟು ಬದಲಿಗೆ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ಮುಂದುವರಿಸಬೇಕೆಂದು ಮನವಿ ಮಾಡಿದ್ದಾರೆ.

ದಿಢೀರ್ ಈ ನಿಯಮ ಸರಿಯಲ್ಲ. ಮೊದಲೇ ಹೇಳಿದ್ದರೆ ನಾವು ಸಿನಿಮಾ ರಿಲೀಸ್ ಮಾಡುತ್ತಿರಲಿಲ್ಲ. ನಾವು ಈಗಾಗಲೇ ಭಾನುವಾರದವರೆಗೆ ಟಿಕೆಟ್ ಕೊಟ್ಟಿದ್ದೇವೆ. ದಿಢೀರ್ ನಿರ್ಧಾರದಿಂದ ಸಮಸ್ಯೆಯಾಗಲಿದೆ ಎಂದು ಹೇಳಿದ್ದಾರೆ.

 

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...