ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಸೆಪ್ಟೆಂಬರ್ 15 ರಂದು ಗುದ್ದಲಿಪೂಜೆ ನಡೆಯಲಿದೆ.
ಈ ಹಿನ್ನಲೆಯಲ್ಲಿ ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ಅವರು ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಇದೇ ತಿಂಗಳು 15 ನೇ ತಾರೀಖು ನಡೆಯಲಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಮಾಡಿದ್ದಾರೆ.