ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ 5 ಕೋಟಿ ರೂಪಾಯಿ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಣ ಬಿಡುಗಡೆಗೆ ಸೂಚನೆ ನೀಡಿದ್ದು, ಕೂಡಲೇ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ತಿಳಿಸಿದ್ದಾರೆ. ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಉನ್ನತಮಟ್ಟದ ಸಮಿತಿಯ ಮೊದಲ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಸಿಎಂ, ಕಂಠೀರವ ಸ್ಟುಡಿಯೋ ಆವರಣದಲ್ಲಿ ಒಂದು ಎಕರೆ 24 ಗುಂಟೆ ಜಾಗದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಯೋಜನೆ ರೂಪಿಸುವಂತೆ ಶೀಘ್ರಗತಿಯಲ್ಲಿ ನಿರ್ಮಾಣ ಕಾರ್ಯ ಕೈಗೊಳ್ಳಲು ಅನುಕೂಲವಾಗುವಂತೆ ಉಪ ಸಮಿತಿ ರಚಿಸಲು ಸೂಚನೆ ನೀಡಿದ್ದಾರೆ.
ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಮೊದಲ ಕಂತಾಗಿ 5 ಕೋಟಿ ರೂಪಾಯಿ ನೀಡಲಿದ್ದು ಸಿನಿಮಾ ಮತ್ತು ಸಮಾಜಕ್ಕೆ ಅಂಬರೀಶ್ ನೀಡಿದ ಕೊಡುಗೆಗಳು ಜನರ ಮನಸ್ಸಿನಲ್ಲಿ ಉಳಿಯುವ ಕೆಲಸವನ್ನು ಮಾಡಲಾಗುತ್ತದೆ ಎಂದು ಹೇಳಲಾಗಿದೆ.
ಸಂಸದೆ ಸುಮಲತಾ ಅಂಬರೀಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ದೊಡ್ಡಣ್ಣ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, ಅಭಿಷೇಕ್ ಅಂಬರೀಶ್ ಅವರಿದ್ದರು.