alex Certify ರಾಜ್ ಕುಮಾರ್ ಜೊತೆ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಶನಿಮಹಾದೇವಪ್ಪ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ ಕುಮಾರ್ ಜೊತೆ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಶನಿಮಹಾದೇವಪ್ಪ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶನಿಮಹಾದೇವಪ್ಪ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

500 ಕ್ಕೂ ಹೆಚ್ಚು ಚಿತ್ರಗಳಲ್ಲಿ ಶನಿಮಹಾದೇವಪ್ಪ ಅಭಿನಯಿಸಿದ್ದಾರೆ. ಡಾ. ರಾಜಕುಮಾರ್ ಜೊತೆಗೆ ‘ಕವಿರತ್ನ ಕಾಳಿದಾಸ’, ‘ಶ್ರೀನಿವಾಸಕಲ್ಯಾಣ’ ಸೇರಿದಂತೆ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನಾಳೆ ಸುಮನಹಳ್ಳಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...