ಚಿತ್ರದುರ್ಗ: ಡಾಲಿ ಧನಂಜಯ್ ಅಭಿನಯದ ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಗಾಸೆ ವೇಷಧಾರಿ ಮೇಲೆ ಹಲ್ಲೆ ಮಾಡಿದ ದೃಶ್ಯವಿದ್ದು, ಇದರ ಬಗ್ಗೆ ಕ್ರಮಕೈಗೊಳ್ಳುವಂತೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಟೌನ್ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ಡಾನ್ ಜಯರಾಜ್ ಪಾತ್ರದಲ್ಲಿರುವ ಧನಂಜಯ್ ಅವರಿಂದ ವೀರಗಾಸೆ ಪಾತ್ರಧಾರಿಗಳಿಗೆ ಅವಮಾನವಾಗಿದೆ. ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವುದಾಗಿ ಆರೋಪಿಸಲಾಗಿದೆ. ‘ಹೆಡ್ ಬುಷ್’ ಚಿತ್ರತಂಡದ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮಕೈಗೊಳ್ಳುವಂತೆ ಮನವಿ ಮಾಡಲಾಗಿದೆ.