ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ನಟ ದರ್ಶನ್ ಕಂಬನಿ ಮಿಡಿದಿದ್ದಾರೆ.
ಚಿರು ಅಕಾಲಿಕ ಮರಣದಿಂದ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ವಿಧಿ ನಿಜವಾಗಿಯೂ ತುಂಬಾ ಕ್ರೂರ ಎಂದು ಹೇಳಿದ್ದಾರೆ.
ಚಿರು ನಿಧನದ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಮೇಘನಾ ಹಾಗೂ ಸರ್ಜಾ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ ದರ್ಶನ್, ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಅವರ ಅಂತಿಮ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.