alex Certify ವಂಚನೆ ಪ್ರಕರಣ: ತಲೆ ತೆಗೆಯುತ್ತೇನೆ ಎಂದು ಗುಡುಗಿದ ದರ್ಶನ್, ತಪ್ಪೊಪ್ಪಿಕೊಂಡ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಂಚನೆ ಪ್ರಕರಣ: ತಲೆ ತೆಗೆಯುತ್ತೇನೆ ಎಂದು ಗುಡುಗಿದ ದರ್ಶನ್, ತಪ್ಪೊಪ್ಪಿಕೊಂಡ ಮಹಿಳೆ

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಸರಲ್ಲಿ ವಂಚನೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆರೋಪಿತೆ ಅರುಣಾಕುಮಾರಿ ಪೊಲೀಸರ ಎದುರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ನಾನು ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು ದರ್ಶನ್ ಅವರೊಂದಿಗೆ ಮಾತನಾಡಿದ್ದು ನಿಜ ಎಂದು ಅರುಣಾಕುಮಾರಿ ಪೊಲೀಸರ ಎದುರು ಹೇಳಿಕೆ ನೀಡಿದ್ದು, ಅವರ ಹೇಳಿಕೆ ದಾಖಲಿಸಿಕೊಂಡ ಪೊಲೀಸರು ಇವತ್ತು ಕೋರ್ಟಿಗೆ ಹಾಜರುಪಡಿಸುವ ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಲವು ಸಾಕ್ಷ್ಯಗಳನ್ನು ಕಲೆ ಹಾಕಿ ತನಿಖೆ ಮುಂದುವರಿಸಿದ್ದಾರೆ.

ದರ್ಶನ್ ಅವರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅವರ ಆಪ್ತ ಸ್ನೇಹಿತರಿಗೆ ತೋರಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಮೈಸೂರಿನ ನರಸಿಂಹರಾಜ ಉಪ ವಿಭಾಗದ ಎಸಿಪಿ ಕಚೇರಿಗೆ ಆಗಮಿಸಿದ್ದ ದರ್ಶನ್ ಮಾಹಿತಿ ನೀಡಿ ಹೊರಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡರೂ ಅವರ ರೆಕ್ಕೆಯನ್ನಲ್ಲ, ತಲೆಯನ್ನೇ ತೆಗೆಯುತ್ತೇನೆ ಎಂದು ಗುಡುಗಿದ್ದಾರೆ.

ನನಗೆ ಯಾರೂ ಬ್ಲಾಕ್ಮೇಲ್ ಮಾಡಿಲ್ಲ. ನನ್ನ ಮೇಲೆ ಗೊಂಬೆ ಕೂರಿಸುವ ಪ್ರಯತ್ನ ನಡೆಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದು, ಬಳಿಕ ಹೆಚ್ಚಿನ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...