alex Certify BIG BREAKING: ನಟ ದರ್ಶನ್ ಹೆಸರಲ್ಲಿ 25 ಕೋಟಿ ರೂ. ಸಾಲ ಪಡೆದು ವಂಚನೆಗೆ ಯತ್ನ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಟ ದರ್ಶನ್ ಹೆಸರಲ್ಲಿ 25 ಕೋಟಿ ರೂ. ಸಾಲ ಪಡೆದು ವಂಚನೆಗೆ ಯತ್ನ…?

ಮೈಸೂರು: ನಟ ದರ್ಶನ್ ಅವರ ಹೆಸರಿನಲ್ಲಿ ಸಾಲ ಪಡೆದು ವಂಚಿಸಲು ಯತ್ನ ನಡೆದಿರುವ ಆರೋಪ ಕೇಳಿಬಂದಿದೆ. ದರ್ಶನ್ ಹೆಸರಲ್ಲಿ ಸಾಲಕ್ಕೆ ಸ್ನೇಹಿತರಿಂದ ಅರ್ಜಿ ಹಾಕಲಾಗಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ ಬಳಿಗೆ ತೆರಳಿದ್ದ ನಕಲಿ ಬ್ಯಾಂಕ್ ಮ್ಯಾನೇಜರ್ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾನು ಬ್ಯಾಂಕ್ ಮ್ಯಾನೇಜರ್ ಆಗಿದ್ದು, ಸಾಲದ ವಿಚಾರವಾಗಿ ಮಾತನಾಡಲು ಬಂದಿದ್ದೇನೆ ಎಂದು ದರ್ಶನ್ ಗೆ ಹೇಳಿದ್ದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

25 ಕೋಟಿ ರೂಪಾಯಿ ಲೋನ್ ಪಡೆಯಲು ಅರ್ಜಿ ಹಾಕಲಾಗಿದೆ ಎಂದು ಮಹಿಳಾ ಮ್ಯಾನೇಜರ್ ದರ್ಶನ್ ಗೆ ಹೇಳಿದ್ದಾಳೆ. ನಿಮ್ಮ ಹೆಸರು ಬಳಸಿಕೊಂಡು ಸಾಲಕ್ಕೆ ಅರ್ಜಿ ಹಾಕಲಾಗಿದೆ. ಈ ಬಗ್ಗೆ ಮಾಹಿತಿ ಪಡೆಯಲು ಬಂದಿದ್ದೇನೆ ಎಂದು ಮಹಿಳೆ ತಿಳಿಸಿದ್ದು, ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡರೊಂದಿಗೆ ಬಂದಿದ್ದು, ಪರಿಶೀಲನೆ ನಡೆಸಿದಾಗ ಲೋನ್ ಪಡೆಯಲು ಯಾರೂ ಕೂಡ ಅರ್ಜಿ ಸಲ್ಲಿಸದಿರುವುದು ಗೊತ್ತಾಗಿದೆ.

ಈ ಹಿನ್ನೆಲೆಯಲ್ಲಿ ದರ್ಶನ್ ಸ್ನೇಹಿತರು ಎರಡು ದಿನದ ಹಿಂದೆ ಹೆಬ್ಬಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದರ್ಶನ್ ಸ್ನೇಹಿತರ ದೂರನ್ನು ಆಧರಿಸಿ ಮ್ಯಾನೇಜರ್ ಎಂದು ಹೇಳಿಕೊಂಡಿದ್ದ ಮಹಿಳೆಯನ್ನು ವಶಕ್ಕೆ ಪಡೆದ ಹೆಬ್ಬಾಳ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಎಸಿಪಿ ಕಚೇರಿಗೆ ಆಗಮಿಸಿ ಮಾಹಿತಿ ನೀಡಿದ್ದಾರೆ. ಮ್ಯಾನೇಜರ್ ಬಗ್ಗೆ ದರ್ಶನ್ ಅವರಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ವಿಚಾರಣೆಯ ಸಂದರ್ಭದಲ್ಲಿ ನಿರ್ಮಾಪಕ ಉಮಾಪತಿ ಹೇಳಿದ್ದಕ್ಕೆ ರೀತಿ ಮಾಡಿದ್ದಾಗಿ ಮಹಿಳೆ ಹೇಳಿಕೊಂಡಿದ್ದಾರೆ ಎನ್ನಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...