alex Certify
ಕನ್ನಡ ದುನಿಯಾ       Mobile App
       

Kannada Duniya

ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಭರ್ಜರಿ ಖುಷಿ ಸುದ್ದಿ

Roberrt Makers Give A Jolt To Darshan Fans

ಲಾಕ್ಡೌನ್ ಜಾರಿಯಾಗಿದ್ದರಿಂದ ಚಿತ್ರರಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಸಿನಿಮಾ ಬಿಡುಗಡೆ ಮುಂದೂಡಿಕೆಯಾಗಿದೆ.

ಇದೇ ಸಂದರ್ಭದಲ್ಲಿ ಧಾರಾವಾಹಿ ಚಿತ್ರೀಕರಣ ಮತ್ತು ಚಿತ್ರರಂಗದ ಚಟುವಟಿಕೆಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರ ಬಿಡುಗಡೆಯಾಗಿ ಅಭಿಮಾನಿಗಳು ಹಬ್ಬ ಆಚರಿಸಬೇಕಿತ್ತು.

ಏಪ್ರಿಲ್ 9ರಂದು ಬಿಡುಗಡೆಯಾಗಬೇಕಿದ್ದ ‘ರಾಬರ್ಟ್’ ಲಾಕ್ಡೌನ್ ಜಾರಿಯಾಗಿದ್ದರಿಂದ ಬಿಡುಗಡೆಯಾಗಿಲ್ಲ. ಈ ನಡುವೆ ದರ್ಶನ್ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಲಾಗಿದೆ. ಮೇ 25 ರಂದು ‘ರಾಬರ್ಟ್’ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗುವುದು. ಚಿತ್ರದ ನಿರ್ದೇಶಕ ತರುಣ್ ಸುಧೀರ್ ಈ ಕುರಿತು ಮಾಹಿತಿ ನೀಡಿದ್ದು, ರಂಜಾನ್ ಹಬ್ಬದ ಪ್ರಯುಕ್ತ ‘ರಾಬರ್ಟ್’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ವಿಚಾರ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...