alex Certify ‘ರಾಬರ್ಟ್’ ಚಿತ್ರದ ನಿರೀಕ್ಷೆಯಲ್ಲಿದ್ದವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಶುಭ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಬರ್ಟ್’ ಚಿತ್ರದ ನಿರೀಕ್ಷೆಯಲ್ಲಿದ್ದವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಶುಭ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ರಾಬರ್ಟ್’ ಪೋಸ್ಟರ್ ಬಿಡುಗಡೆಯಾಗಿದೆ. ರಂಜಾನ್ ಹಬ್ಬದ ಪ್ರಯುಕ್ತ ‘ರಾಬರ್ಟ್’ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹಲ್ಚಲ್ ಸೃಷ್ಟಿಸಿದೆ. ಅಭಿಮಾನಿಗಳ ಸಂಭ್ರಮ ಹೇಳತೀರದಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಏಪ್ರಿಲ್ ನಲ್ಲಿ ‘ರಾಬರ್ಟ್’ ಬಿಡುಗಡೆಯಾಗಬೇಕಿತ್ತು. ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ಡೌನ್ ಜಾರಿ ಮಾಡಿದ ಕಾರಣ ಚಿತ್ರದ ಬಿಡುಗಡೆ ಮುಂದೂಡಿಕೆ ಆಗಿದೆ. ಆದರೆ, ದರ್ಶನ್ ಅಭಿಮಾನಿಗಳಿಗೆ ನಿರಾಸೆಯಾಗದಂತೆ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಎಲ್ಲರ ಜೀವನಶೈಲಿ ಸಹಜಸ್ಥಿತಿಗೆ ಬರುತ್ತಿದ್ದಂತೆ ‘ರಾಬರ್ಟ್’ ಚಿತ್ರ ನಿಮ್ಮ ಮಡಿಲಿಗೆ ಸೇರಲಿದೆ. ಮನೆಯಲ್ಲಿ ಇರಿ, ಮನೆಯವರಿಗಾಗಿ ಜಾಗೃತರಾಗಿರಿ ಎಂದು ದರ್ಶನ್ ಸಲಹೆ ನೀಡಿದ್ದಾರೆ. ಉಮಾಪತಿ ಶ್ರೀನಿವಾಸ್ ನಿರ್ಮಾಣ ಮಾಡಿರುವ ಚಿತ್ರವನ್ನು ತರುಣ್ ಸುಧೀರ್ ನಿರ್ದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...