alex Certify ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಬೇಸರದ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಬೇಸರದ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ರಾಬರ್ಟ್’ ಬಿಡುಗಡೆ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಬೇಸರದ ಸುದ್ದಿ ಇಲ್ಲಿದೆ. ಈ ವರ್ಷ ‘ರಾಬರ್ಟ್’ ಬಿಡುಗಡೆಯಾಗುವುದಿಲ್ಲ ಎಂದು ಹೇಳಲಾಗಿದೆ.

ಲಾಕ್ ಡೌನ್ ಸಡಿಲಿಕೆಯಾದ ನಂತರದಲ್ಲಿ ಚಿತ್ರಮಂದಿರಗಳು ಓಪನ್ ಆಗಿದ್ದರೂ, ಪೂರ್ಣಪ್ರಮಾಣದಲ್ಲಿ ಪ್ರೇಕ್ಷಕರು ಬರುತ್ತಿಲ್ಲ. ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಡಿಸೆಂಬರ್ ನಲ್ಲಿ ಸ್ಟಾರ್ ನಟರೊಬ್ಬರ ಸಿನಿಮಾ ಬಿಡುಗಡೆಗೆ ಪ್ಲಾನ್ ಮಾಡಿಕೊಳ್ಳಲಾಗಿತ್ತು.

ಅಂತೆಯೇ ಆರಂಭದಿಂದಲೂ ಭಾರಿ ನಿರೀಕ್ಷೆ ಮೂಡಿಸಿದ್ದ ‘ರಾಬರ್ಟ್’ ಡಿಸೆಂಬರ್ ನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಆದರೆ ‘ರಾಬರ್ಟ್’ ಸೇರಿದಂತೆ ಬಹುತೇಕ ಬಿಗ್ ಬಜೆಟ್ ಸಿನಿಮಾಗಳು ಈ ವರ್ಷ ಬಿಡುಗಡೆಯಾಗುವುದು ಡೌಟ್ ಎನ್ನಲಾಗಿದ್ದು, ಇದರಿಂದಾಗಿ ಹಬ್ಬ ಮಾಡಲು ಕಾಯುತ್ತಿದ್ದ ದರ್ಶನ್ ಅಭಿಮಾನಿಗಳಿಗೆ ನಿರಾಸೆಯಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...