alex Certify ನಟಿ ದೀಪಿಕಾ ಪಡುಕೋಣೆ ಕುಟುಂಬಕ್ಕೆ ಕೊರೋನಾ ಶಾಕ್: ಎಲ್ಲರಿಗೂ ಸೋಂಕು -ತಂದೆ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ದೀಪಿಕಾ ಪಡುಕೋಣೆ ಕುಟುಂಬಕ್ಕೆ ಕೊರೋನಾ ಶಾಕ್: ಎಲ್ಲರಿಗೂ ಸೋಂಕು -ತಂದೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಕುಟುಂಬದವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಅವರ ತಂದೆ ಹಾಗೂ ಮಾಜಿ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರಿಗೂ ಪಾಸಿಟಿವ್ ಬಂದಿದ್ದು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

1980 ರಲ್ಲಿ ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಪ್ರಕಾಶ್ ಪಡುಕೋಣೆ ಆಸ್ಪತ್ರೆಗೆ ದಾಖಲಾಗಿದ್ದು, ಈ ವಾರ ಬಿಡುಗಡೆಯಾಗಲಿದ್ದಾರೆ. 10 ದಿನಗಳ ಹಿಂದೆ ಪ್ರಕಾಶ್ ಮತ್ತು ಅವರ ಪತ್ನಿ ಉಜ್ವಲಾ ಹಾಗೂ ಎರಡನೇ ಪುತ್ರಿ ಅನಿಷಾ ಅವರಿಗೆ ರೋಗ ಲಕ್ಷಣ ಕಂಡು ಬಂದಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಂಡ ಸಂದರ್ಭದಲ್ಲಿ ಪಾಸಿಟಿವ್ ಬಂದಿದೆ. ಒಂದು ವಾರ ಪ್ರತ್ಯೇಕವಾಗಿದ್ದ ಪ್ರಕಾಶ್ ಅವರು ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಇನ್ನು ಎರಡು-ಮೂರು ದಿನಗಳಲ್ಲಿ ಬಿಡುಗಡೆಯಾಗಲಿದ್ದಾರೆ. ಅವರ ಪತ್ನಿ ಮತ್ತು ಪುತ್ರಿ ಮನೆಯಲ್ಲೇ ಚಿಕಿತ್ಸೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...