alex Certify ʼನಿನ್ನ ಸನಿಹಕೆʼ ಎನ್ನುತ್ತ ಚಿತ್ರರಂಗಕ್ಕೆ ಬರ್ತಿದ್ದಾರೆ ದೊಡ್ಮನೆ ಕುಡಿ ಧನ್ಯ ರಾಮ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼನಿನ್ನ ಸನಿಹಕೆʼ ಎನ್ನುತ್ತ ಚಿತ್ರರಂಗಕ್ಕೆ ಬರ್ತಿದ್ದಾರೆ ದೊಡ್ಮನೆ ಕುಡಿ ಧನ್ಯ ರಾಮ್ ಕುಮಾರ್

ದೊಡ್ಮನೆಯ ಕುಡಿ ಧನ್ಯ ರಾಮ್ ಕುಮಾರ್, ʼನಿನ್ನ ಸನಿಹಕೆʼ ಸಿನಿಮಾ ಮೂಲಕ ನಾಯಕಿಯಾಗಿ ಸ್ಯಾಂಡಲ್ವುಡ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ʼನಿನ್ನ ಸನಿಹಕೆʼ ನಟ ಸೂರಜ್ ಗೌಡ ಪ್ರಪ್ರಥಮ ಬಾರಿಗೆ ನಿರ್ದೇಶಿಸಿ, ನಟಿಸಿರೋ ಯೂಥ್ ಫುಲ್ ಲವ್ ಸ್ಟೋರಿ ಇದಾಗಿದೆ. ಚಿತ್ರಕ್ಕೆ ರಘು ದೀಕ್ಷಿತ್ ಸಂಗೀತವಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.

ಈ ಸಿನಿಮಾಗೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ. ಸಿನಿಮಾ ಬಗ್ಗೆ ಸೆನ್ಸಾರ್ ಮಂಡಳಿಯ ಸದಸ್ಯರು ಉತ್ತಮವಾದ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ. ದೊಡ್ಮನೆಯ ಕುಡಿ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿರುವುದಕ್ಕೆ ಅಣ್ಣಾವ್ರ ಕುಟುಂಬಸ್ಥರು ಫುಲ್ ಖುಷ್ ಆಗಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.

ವೈಟ್ ಅಂಡ್ ಗ್ರೇ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಅಕ್ಷಯ್ ರಾಜಶೇಖರ್, ರಂಗನಾಥ್ ಕುಡ್ಲಿ ʼನಿನ್ನ ಸನಿಹಕೆʼ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಈ ಸಿನಿಮಾ ಏಪ್ರಿಲ್ 16ರಂದು ಬೆಳ್ಳಿ ತೆರೆಗೆ ಅಪ್ಪಳಿಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...